ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ವ್ಯಾಪಾರ ಕರೆಸ್ಪಾಂಡೆಂಟ್ ಮೇಲ್ವಿಚಾರಕ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (BOB Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BOB Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ (BOB)
ವೇತನ ಶ್ರೇಣಿ: 10,000 ರಿಂದ 15,000 ರೂ.
ಉದ್ಯೋಗ ಸ್ಥಳ: ದಕ್ಷಿಣ ಕನ್ನಡ
ಶೈಕ್ಷಣಿಕ ಅರ್ಹತೆ:
ಬ್ಯಾಂಕ್ ಆಫ್ ಬರೋಡಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE, MBA , MCA, M.Sc ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Business Correspondent Supervisors – 10,000 ರಿಂದ 15,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Regional Manager, Bank of Baroda, Regional Office, R.E.B Enclave, Ground Floor, Near Duggamma Deranna Hall, Bypass Road, Darbe Puttur, Dakshina Kannada, Karnataka-574202 ಇವರಿಗೆ 30-06-2024 ಮೊದಲು ಕಳುಹಿಸಬೇಕು.
BOB Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-06-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: bankofbaroda.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ
ಕೊಂಕಣ ರೈಲ್ವೆ ಹೊಸ ನೇಮಕಾತಿ 2024, ಅರ್ಹರು ಗಮನಿಸಿ