ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RITES Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು (RITES)
ವೇತನ ಶ್ರೇಣಿ: 19,508 ರೂ. ರಿಂದ 23,340 ರೂ.
ಹುದ್ದೆಗಳ ಸಂಖ್ಯೆ: 15
ಉದ್ಯೋಗ ಸ್ಥಳ: All India
RITES Recruitment 2024 ಹುದ್ದೆಗಳ ವಿವರ:
ಸಹಾಯಕ ವ್ಯವಸ್ಥಾಪಕ (ಸಿವಿಲ್) – 09
ಸಹಾಯಕ ವ್ಯವಸ್ಥಾಪಕ (S&T) – 04
ಸಹಾಯಕ ವ್ಯವಸ್ಥಾಪಕ (ವಿದ್ಯುತ್) – 02
ಶೈಕ್ಷಣಿಕ ಅರ್ಹತೆ:
RITES ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ, ಡಿಪ್ಲೊಮಾ, ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಪದವಿ, ಡಿಪ್ಲೊಮಾ, ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಪವರ್ ಸಪ್ಲೈ/ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್/ಅಪ್ಲೈಡ್ ಎಲೆಕ್ಟ್ರಾನಿಕ್ಸ್/ಡಿಜಿಟಲ್ ಎಲೆಕ್ಟ್ರಾನಿಕ್ಸ್/ಪವರ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಸಹಾಯಕ ಮ್ಯಾನೇಜರ್ – 19,508 ರೂ. ರಿಂದ 23,340 ರೂ.
ವಯೋಮಿತಿ:
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
EWS/SC/ST/PWD ಅಭ್ಯರ್ಥಿಗಳಿಗೆ: 300 ರೂ.
ಸಾಮಾನ್ಯ/OBC ಅಭ್ಯರ್ಥಿಗಳಿಗೆ: 600 ರೂ.
ಪಾವತಿಸುವ ವಿಧಾನ: ಆನ್ಲೈನ್
RITES Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09-01-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: rites.com
ಇತರೆ ಮಾಹಿತಿಗಳನ್ನು ಓದಿ: